ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಕೇರಳದ ಮಾತಾ ಅಮೃತಾನಂದಮಯಿ ದೇವಿ, ತಿಪಟೂರು ತಾಲ್ಲೂಕು ನೊಣವಿನಕೆರೆ ಸೋಮನಕಟ್ಟೆ ಕಾಡಸಿದ್ದೇಶ್ವರ ಮಠದ ಕರಿವೃಷಭಾ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಆಯ್ಕೆ ಮಾಡಿದೆ.
ಧಾರ್ಮಿಕ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್‌ಗೆ ಪರಿಗಣಿಸಲಾಗಿದೆ.
ವಿವಿಧ ಕ್ಷೇತ್ರಗಳ 14 ಪ್ರಮುಖರ ಹೆಸರುಗಳನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಮಾರ್ಚ್ 17ರಂದು ನಡೆಯುವ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಶುಕ್ರವಾರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.