ADVERTISEMENT

ಲೋಕಾಯುಕ್ತ ಕಚೇರಿ 31ರವರೆಗೆ ಬಂದ್‌

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 20:30 IST
Last Updated 24 ಮಾರ್ಚ್ 2020, 20:30 IST
ಮಾರ್ಚ್ 31ರವರೆಗೆ ಲೋಕಾಯುಕ್ತ ನ್ಯಾಯಾಲಯ ಬಂದ್
ಮಾರ್ಚ್ 31ರವರೆಗೆ ಲೋಕಾಯುಕ್ತ ನ್ಯಾಯಾಲಯ ಬಂದ್   

ಬೆಂಗಳೂರು: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಅನುಗುಣವಾಗಿ ಕರ್ನಾಟಕ ಲೋಕಾಯುಕ್ತ ಕಚೇರಿಯನ್ನು ಮಂಗಳವಾರದಿಂದ ಮಾ. 31ರವರೆಗೆ ಬಂದ್‌ ಮಾಡಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿರಬೇಕು. ತುರ್ತು ಕರೆ ಬಂದಾಗ ಕಾರಣ ಹೇಳದೆ ಕರ್ತವ್ಯಕ್ಕೆ ಹಾಜರಾಗಬೇಕು. ಎ ಮತ್ತು ಅದಕ್ಕಿಂತ ಮೇಲ್ದರ್ಜೆಯ ಅಧಿಕಾರಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅನುಮತಿ ನೀಡಲಾಗಿದೆ. ಕೆಲಸಕ್ಕೆ ಅಗತ್ಯವಿರುವ ದಾಖಲೆಗಳನ್ನು ಮನೆಗಳಿಗೆ ಒಯ್ಯಲು ಅನುಮತಿ ಕೊಡಲಾಗಿದೆ.ಗ್ರೂಪ್‌ ಬಿ, ಸಿ ಹಾಗೂ ಡಿ ವರ್ಗದ ನೌಕರರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT