ಬೆಂಗಳೂರು: ಉಪ್ಪಾರ ಜನಾಂಗದ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದ್ದು, ವರದಿ ಸ್ವೀಕಾರ ಮಾಡಿ ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಉಪ್ಪಾರ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.
ಚಿತ್ರದುರ್ಗದ ಭಗೀರಥ ಮಠದ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಉಪ್ಪಾರ ಸಮಾಜದ ಮುಖಂಡರ ನಿಯೋಗವು ಸೋಮವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.
ಅಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯ, ಸಮುದಾಯ ಭವನ, ಶಿಕ್ಷಣ ಸಂಸ್ಥೆಗೆ ಜಮೀನು ಮಂಜೂರು ಮಾಡುವುದು, ರಾಜಕೀಯ ಪ್ರಾತಿನಿಧ್ಯ, ಭಗೀರಥ ಗುರುಪೀಠದ ಆಶ್ರಯದಲ್ಲಿ ಮಧುರ ಕಣಿವೆ ಸಹಕಾರ ಸಾಮುದಾಯಿಕ ಬೇಸಾಯ ಸಂಘಕ್ಕೆ 500 ಎಕರೆ ಜಮೀನು ಗುತ್ತಿಗೆ ಅವಧಿ ಮುಗಿದಿದ್ದು, ಗುರುಪೀಠದ ಶಿಕ್ಷಣ ಸಂಸ್ಥೆಗಳ ಟ್ರಸ್ಟ್ ಹೆಸರಿಗೆ ಕಾಯಂ ಆಗಿ ಮಂಜೂರು ಮಾಡುವುದು ಸೇರಿ ಹಲವು ಬೇಡಿಕೆಗಳನ್ನು ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.