ADVERTISEMENT

ಭದ್ರಾ ಮೇಲ್ದಂಡೆ ಯೋಜನೆ ಅನುದಾನಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 8:06 IST
Last Updated 6 ಫೆಬ್ರುವರಿ 2019, 8:06 IST
   

ಚಿತ್ರದುರ್ಗ: ರಾಜ್ಯ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಭದ್ರಾ ಮೇಲ್ದಂಡೆ ಯೋಜನೆಯ ವಲಯ ಕಚೇರಿ ಎದುರು ಜಮಾಯಿಸಿ ಧರಣಿ ಕುಳಿತರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

2009ರಲ್ಲಿ ಕಾಮಗಾರಿ ಪ್ರಾರಂಭವಾಗಿದೆ. 50 ವರ್ಷದ ಹೋರಾಟದ ಪ್ರತಿಫಲವಾಗಿ ಈ ಯೋಜನೆ ಸಿಕ್ಕಿದೆ. ಯಡಿಯೂರಪ್ಪ ಯೋಜನೆಗೆ ಚಾಲನೆ ನೀಡಿ, ಅನುದಾನ ಬಿಡುಗಡೆ ಮಾಡಿದ್ದರು. ಆದರೆ, 2013ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ₹300 ಕೋಟಿ ಬಿಡುಗಡೆ ಮಾಡಿ ಯೋಜನೆ ವಿಳಂಬ ಆಗುವಂತೆ ನೋಡಿಕೊಂಡಿದೆ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.