ADVERTISEMENT

ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆಯಾಗದಿರಲಿ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 15:31 IST
Last Updated 20 ಮಾರ್ಚ್ 2021, 15:31 IST
‘ಸಿಟಿ ಫ್ಯೂಚರ್ಸ್‌’ ಪ್ರದರ್ಶನ ವೀಕ್ಷಿಸಿದ ಅಶ್ವತ್ಥನಾರಾಯಣ
‘ಸಿಟಿ ಫ್ಯೂಚರ್ಸ್‌’ ಪ್ರದರ್ಶನ ವೀಕ್ಷಿಸಿದ ಅಶ್ವತ್ಥನಾರಾಯಣ   

ಬೆಂಗಳೂರು: ‘ಕೇಂದ್ರ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ‘ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ’ ಪಟ್ಟಿಯಲ್ಲಿ ಬೆಂಗಳೂರು ಅಗ್ರಪಟ್ಟ ಅಲಂಕರಿಸಿದೆ. ಈ ಮಹಾನಗರದ ಪ್ರತಿಷ್ಠೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ನಾವೆಲ್ಲಾ ಮತ್ತಷ್ಟು ಮುತುವರ್ಜಿಯಿಂದ ಕೆಲಸ ಮಾಡಬೇಕು’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣಶನಿವಾರ ಹೇಳಿದರು.

ಇನ್‌ಸ್ಟಿಟ್ಯೂಟ್‌ ಆಫ್‌ ಅರ್ಬನ್‌ ಡಿಸೈನರ್ಸ್‌ ಸಂಸ್ಥೆದೊಮ್ಮಲೂರಿನ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರದಲ್ಲಿ (ಬಿಐಸಿ) ಆಯೋಜಿಸಿರುವ ಎರಡು ದಿನಗಳ ‘ಸಿಟಿ ಫ್ಯೂಚರ್ಸ್‌’ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವೇಗ ಮತ್ತು ವ್ಯವಸ್ಥಿತವಾಗಿ ಬೆಳೆಯುತ್ತಿರುವಜಾಗತಿಕ ಮಟ್ಟದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಕೂಡ ಇದೆ. ಹೀಗಾಗಿ ಎಲ್ಲರೂ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುವ ಅಗತ್ಯ ಹೆಚ್ಚಿದೆ’ ಎಂದರು.

ADVERTISEMENT

‘ಕಟ್ಟಡವೊಂದು ಸುಂದರವಾಗಿ ಕಾಣಬೇಕಾದರೆ ಅದರ ವಿನ್ಯಾಸ ಚೆನ್ನಾಗಿರಬೇಕು. ಹೀಗಾಗಿ ಈಗ ಎಲ್ಲರೂ ವಿನ್ಯಾಸಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಇನ್ನು ಮುಂದೆ ಯೋಜಿತ ವಿನ್ಯಾಸ ಮತ್ತು ಪರಿಕಲ್ಪನೆ ಇಟ್ಟುಕೊಂಡು ಸರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು. ಮಲ್ಲೇಶ್ವರದಲ್ಲಿ ಯಾವುದೇ ಕಟ್ಟಡ ನಿರ್ಮಿಸಬೇಕಾದರೂ ನಿರ್ದಿಷ್ಟ ವಿನ್ಯಾಸ ರೂಪಿಸುವ ಪರಿಪಾಠವನ್ನು ನಾವು ಬೆಳೆಸಿಕೊಂಡಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.