ADVERTISEMENT

ಸ್ಥಳೀಯ ಸಂಸ್ಥೆಗಳ ಚುನಾವಣೆ: ಸ್ವಯಂ ಪ್ರೇರಿತ ಅರ್ಜಿ ದಾಖಲು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 18:44 IST
Last Updated 10 ಡಿಸೆಂಬರ್ 2020, 18:44 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಾಕಿ ಇರುವ ಬಗ್ಗೆ ವಿಚಾರಣೆ ನಡೆಸಲು ಸ್ವಯಂ ಪ್ರೇರಿತ ಅರ್ಜಿ ದಾಖಲಿಸಲು ಹೈಕೋರ್ಟ್ ಆದೇಶಿಸಿದೆ. ಎಷ್ಟು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಾಕಿ ಇದೆ ಎಂಬುವರ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

‘ಸಂವಿಧಾನದ 243ನೇ ವಿಧಿಯ ಪ್ರಕಾರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದ ಕೂಡಲೇ ಚುನಾವಣೆ ನಡೆಸಬೇಕು. ಈ ಬಗ್ಗೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡು ಮುಂದಿನ ಗುರುವಾರ ವಿಚಾರಣೆ ನಿಗದಿ ಮಾಡಬೇಕು’ ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿತು.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಪರಿಶೀಲನೆ ನಡೆಸಿದ ಪೀಠ, ಅವಧಿ ಮುಗಿಯುವ ಮೊದಲೇ ಚುನಾವಣೆ ನಡೆಸಬೇಕು ಎಂಬ ಸಾಂವಿಧಾನಿಕ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿತು.

ADVERTISEMENT

‘ವಿಜಯ‍ಪುರ ಪಾಲಿಕೆ: ಕಾಲಮಿತಿಯಲ್ಲಿ ಚುನಾವಣೆ ನಡೆಸಿ’

ವಿಜಯಪುರ ನಗರ ಪಾಲಿಕೆ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.

ಪಾಲಿಕೆ ಚುನಾಯಿತ ಪ್ರತಿನಿಧಿಗಳ ಅವಧಿ 2019ರ ಜುಲೈ 14ರಲ್ಲೇ ಮುಗಿದಿದೆ. ವಾರ್ಡ್‌ಗಳ ಮರು ವಿಂಗಡಣೆ ಪಟ್ಟಿಯನ್ನು ಗರಿಷ್ಠ ಮೂರು ವಾರಗಳಲ್ಲಿ ಪ್ರಕಟಿಸಬೇಕು. ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನು ಎರಡು ತಿಂಗಳಲ್ಲಿ ಪ್ರಕಟಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿತು. ಮತದಾರರ ಪಟ್ಟಿ ಪ್ರಕಟವಾದ ನಂತರ 45 ದಿನಗಳಲ್ಲಿ ಚನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಆಯೋಗಕ್ಕೆ ತಿಳಿಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.