ADVERTISEMENT

ಮೋದಿ ಮನೆ ಮುಂದೆ ವಿಜಯೇಂದ್ರ ಪ್ರತಿಭಟಿಸಲಿ: ಸಚಿವ ತಂಗಡಗಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 13:05 IST
Last Updated 29 ಜುಲೈ 2025, 13:05 IST
<div class="paragraphs"><p>ಶಿವರಾಜ ತಂಗಡಗಿ</p></div>

ಶಿವರಾಜ ತಂಗಡಗಿ

   

ಕೊಪ್ಪಳ: 'ಈ ಬಾರಿಯ ಮುಂಗಾರಿನಲ್ಲಿ ಬಿತ್ತನೆ ಬೇಗನೆ ಆರಂಭವಾಗಿರುವ ಕಾರಣ ಈಗ ಯೂರಿಯಾ ರಸಗೊಬ್ಬರದ ಕೊರತೆಯಾಗಿದೆ. ಒಂದು ದಿನ ತಡವಾದರೂ ರೈತರಿಗೆ ನಿಶ್ಚಿತವಾಗಿಯೂ ಗೊಬ್ಬರ ಕೊಡುತ್ತೇವೆ. ರೈತರ ಹೆಸರಿನಲ್ಲಿ ರಾಜಕಾರಣ ಮಾಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯದಲ್ಲಿ ಪ್ರತಿಭಟನೆ ಮಾಡುವುದು ಬಿಟ್ಟು, ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ' ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ‘ಪ್ರತಿಭಟನೆ ಮಾಡುವ ಯಾವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ. ಅವರಿಗೆ ಯಾವುದೇ ನಾಚಿಕೆ, ಮಾನ, ಮರ್ಯಾದೆ ಇಲ್ಲ. ಯೂರಿಯಾ ಪೂರೈಕೆ ಮಾಡುವುದು ರಾಜ್ಯ ಸರ್ಕಾರವೇ’ ಎಂದು ಪ್ರಶ್ನಿಸಿದರು.  

ADVERTISEMENT

‘ಈ ವರ್ಷ ಬಿತ್ತನೆ ಬೇಗನೆ ಆರಂಭವಾಗಿದೆ. ಜನರಿಗೆ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು, ಅವರ ಮಾತನ್ನು ಮಾಧ್ಯಮದವರು ನಂಬಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.