ADVERTISEMENT

ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜೂನ್ 2021, 6:24 IST
Last Updated 15 ಜೂನ್ 2021, 6:24 IST
ಸಂಚಾರಿ ವಿಜಯ್‌ ನಿಧನಕ್ಕೆ ಚೆನ್ನೈಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿ ಕನ್ನಡದಲ್ಲೇ ಟ್ವೀಟ್ ಮಾಡಿದೆ.
ಸಂಚಾರಿ ವಿಜಯ್‌ ನಿಧನಕ್ಕೆ ಚೆನ್ನೈಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿ ಕನ್ನಡದಲ್ಲೇ ಟ್ವೀಟ್ ಮಾಡಿದೆ.   

ಬೆಂಗಳೂರು:ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ನಿಧನಕ್ಕೆ ಚೆನ್ನೈಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿ ಕನ್ನಡದಲ್ಲೇ ಟ್ವೀಟ್ ಮಾಡಿದೆ.

‘ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. ಚೆನ್ನೈಯಲ್ಲಿರುವ ಅಮೆರಿಕ ದೂತಾವಾಸ ಕಚೇರಿಯಲ್ಲಿ 2018ರಲ್ಲಿ ‘ಪ್ರೈಡ್’ ತಿಂಗಳ ಆಚರಣೆಯ ಪ್ರಯುಕ್ತ ತೃತೀಯ ಲಿಂಗಿಗಳ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ–ಅವಳು’ ಪ್ರದರ್ಶನ ಮತ್ತು ಸಂವಾದದಲ್ಲಿ ಸಂಚಾರಿ ವಿಜಯ್ ಭಾಗಿಯಾಗಿದ್ದರು. ಆರ್‌ಐಪಿ’ ಎಂದು ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿರುವುದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.