ADVERTISEMENT

ನಾಳೆ ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಆರಂಭ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2025, 4:42 IST
Last Updated 16 ಜನವರಿ 2025, 4:42 IST
Venugopala K.
   Venugopala K.

ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕದ ದೂತಾವಾಸ ಕಚೇರಿ ನಿರ್ಮಿಸಬೇಕೆಂಬ ಬಹುಕಾಲದ ಬೇಡಿಕೆಯ ಕನಸು ಜನವರಿ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಘೋಷಣೆ ಮಾಡಿದ್ದಾರೆ.

"ನನ್ನ ಪ್ರೀತಿಯ ಬೆಂಗಳೂರಿಗರೇ ಇದೀಗ ಅಧಿಕೃತ. ಜನವರಿ 17ರಂದು ಅಮೆರಿಕ ಕಾನ್ಸುಲೇಟ್ ತೆರೆಯಲಾಗುತ್ತಿದೆ" ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ 'ಎಕ್ಸ್' ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಸೂರ್ಯ ಶ್ಲಾಘಿಸಿದ್ದಾರೆ.

ADVERTISEMENT

ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿಯಾಗಿ ಮೈಸೂರು ಪಾಕ್ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಜೈಶಂಕರ್ ಜೊತೆಗಿನ ವಿಡಿಯೊವನ್ನೂ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪಿಸುವುದು ಬಹುಕಾಲದ ಬೇಡಿಕೆಯಾಗಿತ್ತು. ಇಲ್ಲಿಯವರೆಗೆ, ಜನರು ಅಮೆರಿಕ ವೀಸಾಕ್ಕಾಗಿ ಚೆನ್ನೈ ಅಥವಾ ಹೈದರಾಬಾದ್‌ಗೆ ತೆರಳುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.