ADVERTISEMENT

ಚಿರತೆ ಸೆರೆಗೆ ಆಧುನಿಕ ತಂತ್ರಜ್ಞಾನ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2023, 16:27 IST
Last Updated 31 ಅಕ್ಟೋಬರ್ 2023, 16:27 IST
<div class="paragraphs"><p>ಸಚಿವ ಈಶ್ವರ ಬಿ. ಖಂಡ್ರೆ</p></div>

ಸಚಿವ ಈಶ್ವರ ಬಿ. ಖಂಡ್ರೆ

   

ಬೆಂಗಳೂರು: ಥರ್ಮಲ್‌ ಇಮೇಜ್‌ ಕ್ಯಾಮೆರಾಗಳನ್ನು ಬಳಸಿ ರಾತ್ರಿ ವೇಳೆಯೂ ಚಿರತೆ ಪತ್ತೆ ಕಾರ್ಯಾಚರಣೆ ಮಾಡಲು ಅರಣ್ಯ ಪರಿಣತರ ಪಡೆಯನ್ನು ಸಜ್ಜುಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. 

ಮಂಗಳವಾರ ಸುದ್ದಿಗಾರರ ಜತೆ ಮತನಾಡಿದ ಅವರು, ಬೆಂಗಳೂರು ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಆಧುನಿಕ ತಂತ್ರಜ್ಞಾನ ಬಳಸಿ ಚಿರತೆ ಸೆರೆ ಹಿಡಿಯಲು ಇಲಾಖೆ ಸರ್ವ ಪ್ರಯತ್ನ ಮಾಡುತ್ತಿದೆ. ಡ್ರೋನ್ ಕ್ಯಾಮೆರಾಗಳ ನೆರವಿನಿಂದಲೂ ಶೋಧ ಕಾರ್ಯ ನಡೆಸುತ್ತಿದೆ. ಈಗಾಗಲೇ ಚಿರತೆ ಓಡಾಡಿರುವ ಸ್ಥಳದಲ್ಲಿ ಬೋನುಗಳನ್ನು ಇಡಲಾಗಿದೆ. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದರು.

ADVERTISEMENT

ಮೈಸೂರಿನಿಂದ ಚಿರತೆ ಹಿಡಿಯಲು ತಂಡ ಆಗಮಿಸಿದೆ. ಮುಖ್ಯಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಳ್ಕೆಡೆ ನೇತೃತ್ವದಲ್ಲಿ 70 ಜನರ ತಂಡ ಚಿರತೆ ಸೆರೆಗೆ ಪ್ರಯತ್ನಿಸುತ್ತಿದೆ. ಜನರು ಮಕ್ಕಳನ್ನು ಒಂಟಿಯಾಗಿ ರಸ್ತೆಯಲ್ಲಿ ಆಟವಾಡಲು ಬಿಡಬಾರದು. ರಾತ್ರಿಯ ವೇಳೆ ಜನ ಒಂಟಿಯಾಗಿ ಸಂಚರಿಸಬಾರದು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.