ಮಂಗಳೂರು: ಕೋಮು ವಿವಾದಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಆತ್ಮವಿಶ್ವಾಸ ಮಾತುಗಳನ್ನಾಡಿ ಜನರಲ್ಲಿ ಧೈರ್ಯ ತುಂಬಬೇಕಾಗಿದ್ದ ಮುಖ್ಯಮಂತ್ರಿ, ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟು ಮೌನವಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಆರೋಪಿಸಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮುವಾದಿಗಳ ವಿವಾದ ಮಟ್ಟ ಹಾಕುವ ಕೆಲಸ ಸರ್ಕಾರದಿಂದ ಆಗಬೇಕು. ಯಾವುದೇ ಧರ್ಮದವರು ತಪ್ಪು ಮಾಡಿದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಕೆಲವು ಕೋಮು ಶಕ್ತಿಗಳು ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಸರ್ಕಾರ ಸುಮ್ಮನಿದ್ದರೆ, ಅವರಿಗೆ ಮತ್ತಷ್ಟು ತಪ್ಪು ಮಾಡಲು ಮತ್ತಷ್ಟು ಧೈರ್ಯ ಬರುವ ಸಾಧ್ಯತೆ ಇರುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.