ADVERTISEMENT

ಹಿಜಾಬ್ ವಿವಾದ: ಗೊಂದಲ ತಿಳಿಗೊಳಿಸಲು ಯು.ಟಿ.ಖಾದರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2022, 19:06 IST
Last Updated 15 ಫೆಬ್ರುವರಿ 2022, 19:06 IST
ಯು.ಟಿ.ಖಾದರ್
ಯು.ಟಿ.ಖಾದರ್   

ಬೆಂಗಳೂರು: ‘ಹಿಜಾಬ್‌ ಧರಿಸಿ ಬಂದಿದ್ದ ಕಾರಣಕ್ಕೆ ಪರೀಕ್ಷೆ ಬರೆಯಲು ಬಿಡುತ್ತಿಲ್ಲ. ಸಾಕಷ್ಟು ಕಡೆಗಳಲ್ಲಿ ಶಿಕ್ಷಕಿಯರಿಗೂ ಹಿಜಾಬ್‌ ತೆಗೆದು ಬರುವಂತೆ ಒತ್ತಾಯಿಸಲಾಗುತ್ತಿದೆ. ಇದರಿಂದ ಗೊಂದಲ ಮುಂದುವರಿದಿದೆ’ ಎಂದು ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್‌ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಹಿಜಾಬ್‌ ವಿಷಯವಾಗಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದಬಳಿಕವೂ ಶಾಲೆಗಳಲ್ಲಿ ಗೊಂದಲ ಮುಂದುವರಿದಿದೆ. ತಕ್ಷಣವೇ ಸರಿಪಡಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ‘ಯಾವುದೇಗೊಂದಲವಿಲ್ಲ. ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.