ADVERTISEMENT

ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಅಕ್ಟೋಬರ್ 2022, 13:36 IST
Last Updated 6 ಅಕ್ಟೋಬರ್ 2022, 13:36 IST
ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಸ್ತಬ್ಧಚಿತ್ರ ಮೆರವಣಿಗೆ (ಟ್ವಿಟರ್ ಚಿತ್ರ)
ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಸ್ತಬ್ಧಚಿತ್ರ ಮೆರವಣಿಗೆ (ಟ್ವಿಟರ್ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮಂಗಳೂರಿನಲ್ಲಿ ಬುಧವಾರ ನಡೆದ ದಸರಾ ಉತ್ಸವದಲ್ಲಿ ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಸ್ತಬ್ಧಚಿತ್ರ ಮೆರವಣಿಗೆ ನಡೆಸಲಾಗಿತ್ತು. ಇದನ್ನು ಖಂಡಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಬಿಜೆಪಿ ವಿಕೃತಿ ಮೆರೆದಿದೆ’ ಎಂದು ದೂರಿದೆ.

ನಮ್ಮದು ಸಾಂವಿಧಾನಿಕ ನ್ಯಾಯ. ಬಿಜೆಪಿಯದ್ದು ಬುಲ್ಡೋಜರ್ ನ್ಯಾಯ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ADVERTISEMENT

‘ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ. ರೈತರ ಆತ್ಮಹತ್ಯೆ ಡಬಲ್ ಆಗಿದೆ, ರೈತರ ಖರ್ಚು ಡಬಲ್ ಆಗಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಉತ್ತರ ಪ್ರದೇಶದಾದ್ಯಂತ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು ಎನ್ನಲಾದ ಮುಸ್ಲಿಂ ವ್ಯಕ್ತಿಗಳ ಮನೆಗಳನ್ನು ನೆಲಸಮ ಮಾಡಲಾಗಿತ್ತು.ಬಿಜೆಪಿ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರು ಪ್ರವಾದಿ ಮಹಮ್ಮದ್‌ ಅವರ ಬಗ್ಗೆ ನೀಡಿದ ‘ಅವಹೇಳನಕಾರಿ’ ಹೇಳಿಕೆಯನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾಕಾರರಮನೆಗಳು ‘ಅಕ್ರಮ’ ಎಂಬ ಕಾರಣಕ್ಕೆ ಸ್ಥಳೀಯಾಡಳಿತ ಸಂಸ್ಥೆಗಳು ಮನೆ ಧ್ವಂಸ ಕಾರ್ಯಾಚರಣೆ ನಡೆಸಿದ್ದವು.

ಇದಾದ ಬಳಿಕಗಲಭೆಕೋರರ ಆಸ್ತಿಗಳನ್ನು ‘ಬುಲ್ಡೋಜರ್‌’ಗಳ ಮೂಲಕ ಧ್ವಂಸಗೊಳಿಸುವ ಕ್ರಮವನ್ನು ರಾಜ್ಯದಲ್ಲೂ ಜಾರಿಗೊಳಿಸಬೇಕು ಎಂಬ ಆಗ್ರಹ ರಾಜ್ಯದ ಬಿಜೆಪಿ ನಾಯಕರಿಂದಲ್ಲೂವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.