ADVERTISEMENT

ಕೃಷ್ಣಾ– ಭೀಮಾ ನದಿ ತೀರದಲ್ಲಿ ಪ್ರವಾಹ: ತುರ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 6:06 IST
Last Updated 28 ಸೆಪ್ಟೆಂಬರ್ 2025, 6:06 IST
   

ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ‌ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಪ್ರವಾಹ ಉಂಟಾದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ.

ನೆರೆ ಪೀಡಿತ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯದ ಮೇಲುಸ್ತುವಾರಿ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸ್ಥಳಕ್ಕೆ ಭೇಟಿ ನೀಡಬೇಕು.

ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಂತ್ರಸ್ತರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ ಮುಖ್ಯಮಂತ್ರಿ ‌ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.