ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ 2004ನೇ ಸಾಲಿನ ಐಎಎಸ್ ಅಧಿಕಾರಿ ವಿ. ಅನ್ಬುಕುಮಾರ್ ಅವರನ್ನು ನೇಮಿಸಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ರಾಜ್ಯ ವಸತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನ್ಬುಕುಮಾರ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್‌ಕುಮಾರ್ ಮೀನಾ ಅವರ ಸ್ಥಾನಕ್ಕೆ ಅನ್ಬುಕುಮಾರ್ ಅವರನ್ನು ನಿಯೋಜಿಸಲಾಗಿದೆ. ಮೀನಾ ಅವರು 2021ರ ಅಕ್ಟೋಬರ್‌ನಿಂದ ಆ ಹುದ್ದೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.