ವಿ. ಸೋಮಣ್ಣ
ತುಮಕೂರು: ‘ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು’’ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಾತಿ ಜನಗಣತಿಗೆ ಕಾಂಗ್ರೆಸ್‌ನಲ್ಲೇ ವಿರೋಧ ವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದರು.
‘ಜಾತಿ ಜನಗಣತಿ ವರದಿ ಸಿದ್ಧಪಡಿಸಲು ಈಗಾಗಲೇ ನೂರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ. ಮತ್ತೊಮ್ಮೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಯಾವುದಕ್ಕೂ ಇಂತಹ ನೂರಾರು ಕೋಟಿ ಹಣ ಖರ್ಚು ಮಾಡಿಲ್ಲವೇ’ ಎಂದು ಪ್ರಶ್ನಿಸಿದರು.
‘ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ನಾನು ಸಚಿವನಾದ ನಂತರ ಅವಕಾಶ ಮಾಡಿಕೊಟ್ಟಿದ್ದೇನೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಪಡೆದುಕೊಳ್ಳಲು ನೆರವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.