ನವದೆಹಲಿ: ಕರ್ನಾಟಕದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಬಾರದು ಎಂದು ಒತ್ತಾಯಿಸಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.
ಈ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ಹಾಗೂ ಸರ್ಜಿಕಲ್ ಐಟಂಗಳು ರೋಗಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ದೊರಕುತ್ತಿತ್ತು. ಖಾಸಗಿಯವರ ಒತ್ತಡಕ್ಕೆ ಮಣಿದು ಈ ಕೇಂದ್ರಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಅವರು ದೂರಿದ್ದಾರೆ.
ಸಿದ್ದರಾಮಯ್ಯ ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದಾರೆ. ಆದರೆ, ಅವರು ಬಡವರು ಹಾಗೂ ತಳವರ್ಗದ ಜನರ ಹಿತ ಕಾಯುತ್ತಿಲ್ಲ. ಸರ್ಕಾರದ ನಿರ್ಧಾರವನ್ನು ಕೂಡಲೇ ಮರುಪರಿಶೀಲನೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.