ADVERTISEMENT

ಪಠ್ಯದಲ್ಲಿ ನಿಜಲಿಂಗಪ್ಪ ವಿಷಯ ಸೇರ್ಪಡೆ: ಸಿಎಂ ಸಿದ್ದರಾಮಯ್ಯಗೆ ವಿ.ಸೋಮಣ್ಣ ಪತ್ರ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 14:13 IST
Last Updated 27 ಆಗಸ್ಟ್ 2024, 14:13 IST
<div class="paragraphs"><p>ವಿ.ಸೋಮಣ್ಣ</p></div>

ವಿ.ಸೋಮಣ್ಣ

   

ನವದೆಹಲಿ: ಕರ್ನಾಟಕದ ಪ್ರೌಢಶಾಲೆಗಳ ಪಠ್ಯಪುಸ್ತಕಗಳಲ್ಲಿ ಎಸ್‌.ನಿಜಲಿಂಗಪ್ಪ ಹಾಗೂ ಕೆಂಗಲ್‌ ಹನುಮಂತಯ್ಯ ಅವರ ಜೀವನ–ಬದುಕು, ರಾಜ್ಯದ ಅಭಿವೃದ್ಧಿಗೆ ಅವರು ಕೈಗೊಂಡ ಕ್ರಮಗಳನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 

ನಿಜಲಿಂಗಪ್ಪ ಹಾಗೂ ಕೆಂಗಲ್ ಅವರ ಜನ್ಮದಿನಾಚರಣೆಗಳನ್ನು ಕರ್ನಾಟಕ ಸರ್ಕಾರದಿಂದ ಆಚರಿಸಬೇಕು. ಬೆಂಗಳೂರು ವಿವಿಯಲ್ಲಿ ಕೆಂಗಲ್‌ ಹಾಗೂ ದಾವಣಗೆರೆ ವಿವಿಯಲ್ಲಿ ನಿಜಲಿಂಗಪ್ಪ ಅಧ್ಯಯನ ಪೀಠಗಳನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.