ADVERTISEMENT

ಎಲ್ಲ ಶಿಕ್ಷಕರಿಗೆ ಲಸಿಕೆ: ಇಲಾಖೆ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 20:16 IST
Last Updated 22 ಜುಲೈ 2021, 20:16 IST

ಬೆಂಗಳೂರು: ರಾಜ್ಯದಲ್ಲಿನ ಎಲ್ಲ ಶಿಕ್ಷಕರು–ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸರ್ಕಾರಿ, ಬಿಬಿಎಂಪಿ, ಮಹಾನಗರ ಪಾಲಿಎಕಗಳು ಮತ್ತು ಖಾಸಗಿ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಬೇಕು ಎಂದು ರಾಜ್ಯ ಲಸಿಕೆ ಅಭಿಯಾನದ ನಿರ್ದೇಶಕರು ಸೂಚಿಸಿದ್ದಾರೆ.

ಶಿಕ್ಷಕರು ಮತ್ತು ಸಿಬ್ಬಂದಿಯು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿಯೇ ಲಸಿಕಾ ವಿತರಣೆ ಶಿಬಿರವನ್ನು ಆಯೋಜಿಸಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳ ದಿನಾಂಕವನ್ನು ನಿಗದಿಪಡಿಸಬೇಕು. ಪ್ರತಿ ಶಾಲೆಯು ನೋಡಲ್ ಅಧಿಕಾರಿಯನ್ನು ನೇಮಿಸಿರಬೇಕು. ಅವರು ಆರೋಗ್ಯ ಇಲಾಖೆ ಅಧಿಕಾರಿಯೊಟ್ಟಿಗೆ ಕೆಲಸ ಮಾಡಬೇಕು. ಲಸಿಕೆ ದಾಸ್ತಾನು ಲಭ್ಯತೆ ಅನುಗುಣವಾಗಿ ಲಸಿಕೆ ನೀಡಲು ಜಿಲ್ಲಾ ಆರೋಗ್ಯಧಿಕಾರಿಗಳು ಕ್ರಮವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.