
ಪ್ರಜಾವಾಣಿ ವಾರ್ತೆ
ನಂದಿ ಗಿರಿಧಾಮ
ಚಿಕ್ಕಬಳ್ಳಾಪುರ: ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಫೆ. 14ರ ಪ್ರೇಮಿಗಳ ದಿನ ಪ್ರವೇಶ ನಿರ್ಬಂಧಿಸಲಾಗಿದೆ.
ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು, ಪ್ರವಾಸಿಗರು ಗಿರಿಧಾಮಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಂದಿ ಗಿರಿಧಾಮಕ್ಕೆ ಅಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.
ಪ್ರತಿ ವರ್ಷದ ಫೆ.14ರಂದು ಗಿರಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಮಿಗಳು ಭೇಟಿ ನೀಡುವರು. ಈ ಹಿಂದಿನಿಂದಲೂ ನಂದಿಬೆಟ್ಟ ಪ್ರೇಮಿಗಳ ನೆಚ್ಚಿನತಾಣ ಎಂದೇ ಪ್ರಖ್ಯಾತಿ ಪಡೆದಿದೆ. ಅಂದು ಬೆಟ್ಟದಲ್ಲಿ ಪ್ರೇಮಿಗಳು ಪರಸ್ಪರ ಪ್ರೇಮ ನಿವೇದನೆ ಮಾಡಿಕೊಳ್ಳುವರು.