ವಾಲ್ಮೀಕಿ ನಿಗಮ
ಚಿತ್ರ ಕೃಪೆ: ಕರ್ನಾಟಕ ಸರ್ಕಾರ ವೆಬ್‌ಸೈಟ್
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹ 94 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ನಾಗೇಂದ್ರ ಸಲ್ಲಿಸಿರುವ ಜಾಮೀನು ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಶುಕ್ರವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ನಾಗೇಂದ್ರ ಪರ ವಕೀಲರು, ‘ಮೆರಿಟ್ ಮೇಲೆ ವಾದಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ಜಾಮೀನು ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಮಾರ್ಗಸೂಚಿ ರೂಪಿಸಿದೆ. ನ್ಯಾಯದಾನದ ದೃಷ್ಟಿಯಿಂದ ನಿಮಗೆ ಕೊನೆಯ ಬಾರಿಗೆ ಅವಕಾಶ ನೀಡಲಾಗುತ್ತಿದೆ’ ಎಂದು ತಿಳಿಸಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.