ADVERTISEMENT

ವಾಲ್ಮೀಕಿ ಶ್ರೀ ಧರಣಿ ಎರಡನೇ ದಿನಕ್ಕೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 20:21 IST
Last Updated 11 ಫೆಬ್ರುವರಿ 2022, 20:21 IST
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಶುಕ್ರವಾರ ಸಾಮರಸ್ಯ ವೇದಿಕೆ ಸಂಚಾಲಕ ವಾದಿರಾಜ್‌ ಭೇಟಿ ನೀಡಿದ್ದರು --–ಪ್ರಜಾವಾಣಿ ಚಿತ್ರ
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಶುಕ್ರವಾರ ಸಾಮರಸ್ಯ ವೇದಿಕೆ ಸಂಚಾಲಕ ವಾದಿರಾಜ್‌ ಭೇಟಿ ನೀಡಿದ್ದರು --–ಪ್ರಜಾವಾಣಿ ಚಿತ್ರ   

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಏಕಾಂಗಿಯಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿದೆ.

ಸ್ವಾಮೀಜಿಗೆ ಬೆಂಬಲ ವ್ಯಕ್ತಪಡಿಸಿ ಹಲವು ಮುಖಂಡರು, ಸಾಹಿತಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿದರು. ‘ಸರ್ಕಾರ ಸಮಾಜದ ಬೇಡಿಕೆಗೆ ಸ್ಪಂದಿಸಬೇಕು. ಶ್ರೀಗಳೇ ಸಮಾಜಕ್ಕಾಗಿ ಧರಣಿ ನಡೆಸುವ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ, ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಾಹಿತಿ ಕಮಲಾ ಹಂಪನಾ ಒತ್ತಾಯಿಸಿದರು.

ಸಾಮರಸ್ಯ ವೇದಿಕೆ ಸಂಚಾಲಕ ವಾದಿರಾಜ್‌ ಸಹ ಭೇಟಿ ನೀಡಿದ್ದರು. ‘ಸಮಾಜಕ್ಕೆ ನೀಡಿರುವ ಮೀಸಲಾತಿ ಹೆಚ್ಚಿಸುವಂತೆ ಆರ್‌ಎಸ್‌ಎಸ್‌ ಸರ್ಕಾರದ ಮೇಲೆ ಪ್ರಭಾವ ಬೀರಬೇಕು’ ಎಂದು ಶ್ರೀಗಳು ಈ ಸಂದರ್ಭದಲ್ಲಿ ವಾದಿರಾಜ್‌ ಅವರನ್ನು ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.