ADVERTISEMENT

ವಾಲ್ಮೀಕಿ ಹಗರಣದ ತನಿಖೆ ಸಿಬಿಐಗೆ ವಹಿಸಬೇಕು: ಈರಣ್ಣ ಕಡಾಡಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 15:56 IST
Last Updated 25 ಜುಲೈ 2024, 15:56 IST
<div class="paragraphs"><p>ಈರಣ್ಣ ಕಡಾಡಿ</p></div>

ಈರಣ್ಣ ಕಡಾಡಿ

   

ನವದೆಹಲಿ: ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿಗಳ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. 

ರಾಜ್ಯಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿದ ಅವರು, ‘ನಿಗಮದಲ್ಲಿ ಕಳೆದ ಒಂದು ವರ್ಷದಲ್ಲಿ ಫಲಾನುಭವಿಗಳ ಆಯ್ಕೆಯೇ ನಡೆದಿಲ್ಲ. ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಮೂಲಸೌಕರ್ಯ ಒದಗಿಸಿಲ್ಲ ಹಾಗೂ ರೈತರ ಜಮೀನುಗಳಿಗೆ ಕೊಳವೆಬಾವಿ ಕೊರೆಸಿಲ್ಲ. ಜನರ ಜೀವನಮಟ್ಟ ಹಾಗೂ ಆರ್ಥಿಕ ಮಟ್ಟ ಸುಧಾರಿಸಲು ಬಳಸಬೇಕಾದ ಹಣವನ್ನು ಲೂಟಿ ಹೊಡೆಯಲಾಗಿದೆ’ ಎಂದು ಕಿಡಿಕಾರಿದರು. 

ADVERTISEMENT

ಈ ಪ್ರಕರಣದಲ್ಲಿ ಸಚಿವರು ರಾಜೀನಾಮೆ ನೀಡಿದ್ದಾರೆ. 20 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. 270 ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ₹40 ಕೋಟಿ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದವರ ನೈಜ ರಕ್ಷಕರು ಎಂದು ಸುಳ್ಳು ಹೇಳುತ್ತಿರುವ ಕಾಂಗ್ರೆಸ್‌ ನಾಯಕರು ದಲಿತರ ದುಡ್ಡನ್ನು ಹಗಲು ದರೋಡೆ ಮಾಡಿದ್ದಾರೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.