ADVERTISEMENT

ಆದೇಶದ ಪ್ರತಿ ಸಿಕ್ಕಿದ ಮೇಲೆ ಪ್ರತಿಭಟನೆ ಸ್ಥಗಿತ: ಪ್ರಸನ್ನಾನಂದ ಸ್ವಾಮೀಜಿ

ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಹೆಚ್ಚಳ 

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 16:30 IST
Last Updated 7 ಅಕ್ಟೋಬರ್ 2022, 16:30 IST
ಪ್ರಸನ್ನಾನಂದ ಸ್ವಾಮೀಜಿ
ಪ್ರಸನ್ನಾನಂದ ಸ್ವಾಮೀಜಿ   

ಬೆಂಗಳೂರು: ಮೀಸಲಾತಿ ಹೆಚ್ಚಿಸುವ ಸಂಬಂಧ ಅಧಿಕೃತ ಆದೇಶದ ಪ್ರತಿ ಸಿಕ್ಕಿದ ಬಳಿಕವೇ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸ್ಥಗಿತಗೊಳಿಸಲು ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ನಿರ್ಧರಿಸಿದೆ.

‘ಮೀಸಲಾತಿ ಪ್ರಮಾಣ ಹೆಚ್ಚಿಸಲು ನಿರ್ಧರಿಸಿರುವುದು ಸಂತಸ ತಂದಿದೆ. ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದೆಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ, ಆದೇಶ ಸಿಕ್ಕಿದ ಬಳಿಕವಷ್ಟೇ ಪ್ರತಿಭಟನೆ ಕೈಬಿಡಲು ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸಮಿತಿ ಸಂಚಾಲಕ ಬಸವರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯು 246 ದಿನ ಪೂರೈಸಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT