ADVERTISEMENT

ಮೀಸಲಾತಿ ಹೆಚ್ಚಳ: ವಾಲ್ಮೀಕಿ ಸ್ವಾಮೀಜಿ ಅವರ 257 ದಿನಗಳ ಧರಣಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2022, 19:19 IST
Last Updated 24 ಅಕ್ಟೋಬರ್ 2022, 19:19 IST
ವಾಲ್ಮೀಕಿ ಪ್ರಸನ್ನಾನಂದ ಶ್ರೀ
ವಾಲ್ಮೀಕಿ ಪ್ರಸನ್ನಾನಂದ ಶ್ರೀ   

ಬೆಂಗಳೂರು: ಮೀಸಲಾತಿ ಹೆಚ್ಚಳ ಕ್ಕಾಗಿ ವಾಲ್ಮೀಕಿ ಗುರುಪೀಠದಪ್ರಸನ್ನಾನಂದಪುರಿ ಸ್ವಾಮೀಜಿ ಅವರು 257 ದಿನಗಳಿಂದ ನಡೆಸಿದ್ದ ಧರಣಿ ಸತ್ಯಾಗ್ರಹವನ್ನು ಸೋಮವಾರ ಮುಕ್ತಾಯಗೊಳಿಸಿದರು.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆಯ ಅಧಿಸೂಚನೆ ಪ್ರತಿಯನ್ನು ಕಂದಾಯ ಸಚಿವ ಆರ್. ಅಶೋಕ ಅವರು ನೀಡಿದ ಬಳಿಕ ಸುದ್ದಿಗಾರರ ಜತೆ ಸ್ವಾಮೀಜಿ ಮಾತನಾಡಿದರು.

‘ಹಿಂದಿನ ಮುಖ್ಯಮಂತ್ರಿಗಳು ನಮ್ಮ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ತೀರ್ಮಾನ ತೆಗೆದುಕೊಳ್ಳಲು ಹಿಂದೇಟು ಹಾಕಿದರು. ಆದರೆ ಈಗಿನ ಮುಖ್ಯ ಮಂತ್ರಿ ಬೊಮ್ಮಾಯಿ ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೀಸಲಾತಿ ಹೋರಾಟದಲ್ಲಿ ಶಾಸಕ ರಾಜೂಗೌಡ ಅವರ ಪಾತ್ರ ಮಹತ್ವದ್ದು, ಅವರೊಬ್ಬ ಡೈನಾಮಿಕ್‌ ಹೀರೋ’ ಎಂದು ಶ್ಲಾಘಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.