ಆರ್. ಅಶೋಕ ಮತ್ತು ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಅಕ್ಕಿ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿರುವ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಈ ಸಂಬಂಧ 'ಪ್ರಜಾವಾಣಿ' ವರದಿ ಉಲ್ಲೇಖಿಸಿ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಶೋಕ, 'ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಇಪ್ಪತ್ತು ತಿಂಗಳ ಆಡಳಿತ ಅವಧಿಯಲ್ಲಿ ಸಾಧಿ 'ಸಿದ್ದು', ಬರೀ ಅಕ್ರಮ, ಅನ್ಯಾಯ, ಭ್ರಷ್ಟಾಚಾರ'. ಅನ್ಯಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡುವುದಾಗಿ ಘೋಷಿಸಿದ್ದರು. ಆದರೆ ಕೊಡುವ 5 ಕೆ.ಜಿ. ಅಕ್ಕಿ ಪೂರೈಕೆಯಲ್ಲಿಯೂ ವ್ಯತ್ಯಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅನ್ನಭಾಗ್ಯ ಯೋಜನೆಯಲ್ಲಿ ಸಾಲು-ಸಾಲು ಅಕ್ರಮ, ಅವ್ಯವಸ್ಥೆ, ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದರೂ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಏನೂ ನಡೆದೇ ಇಲ್ಲ ಎಂಬಂತೆ ಸುಮ್ಮನಿದ್ದಾರೆ ಎಂದು ಅಶೋಕ ಟೀಕಿಸಿದ್ದಾರೆ.
ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ಕೊಡುವುದಾಗಿ ಘೋಷಿಸಿತ್ತು. ಅಗತ್ಯಕ್ಕೆ ತಕ್ಕಷ್ಟು ಅಕ್ಕಿ ಇಲ್ಲದ ಕಾರಣಕ್ಕೆ 5 ಕೆ.ಜಿ. ಅಕ್ಕಿ ಮತ್ತು ₹170 ನೀಡುತ್ತಿತ್ತು. ಇದೇ ಫೆಬ್ರುವರಿಯಲ್ಲಿ ಅಕ್ಕಿ ಲಭ್ಯವಾದ ಕಾರಣ, ಎಲ್ಲರಿಗೂ 10 ಕೆ.ಜಿ. ನೀಡುವುದಾಗಿ ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.