ADVERTISEMENT

ವರ್ತೂರು ಪ್ರಕಾಶ್ ಅಪಹರಿಸಿ ₹ 30 ಕೋಟಿಗೆ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 15:33 IST
Last Updated 1 ಡಿಸೆಂಬರ್ 2020, 15:33 IST
ಮಾಜಿ ಸಚಿವ ವರ್ತೂರು ಪ್ರಕಾಶ್
ಮಾಜಿ ಸಚಿವ ವರ್ತೂರು ಪ್ರಕಾಶ್   

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ₹30 ಕೋಟಿಗೆ ಬೇಡಿಕೆ ಇಡಲಾಗಿದ್ದು, ಈ ಬಗ್ಗೆ ವರ್ತೂರು ಪ್ರಕಾಶ್ ಅವರೇ ಪೊಲೀಸರಿಗೆ ದೂರು ನೀಡಿದ್ದಾರೆ.

‘ಕೋಲಾರದ ಬೆಗ್ಲಹೊಸಹಳ್ಳಿ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್‌ನಿಂದ ಕಾರು ಚಾಲಕ ಸುನೀಲ್ ಸಮೇತ ಪ್ರಕಾಶ್ ಅವರನ್ನು, 8 ದುಷ್ಕರ್ಮಿಗಳ ತಂಡ ಅಪಹರಣ ಮಾಡಿತ್ತು. ನಂತರ, ಹಲ್ಲೆ ಸಹ ಮಾಡಿದೆ. ಬಿಡುಗಡೆಗೆ ₹30 ಕೋಟಿಗೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದರು ಎಂದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದ ಆರೋಪಿಗಳು, ಕಾರಿನಲ್ಲಿ ಸುತ್ತಾಡಿಸಿ ವರ್ತೂರು ಪ್ರಕಾಶ್ ಅವರನ್ನು ಹೊಸಕೋಟೆ ಬಳಿ ಬಿಟ್ಟು ಹೋಗಿದ್ದರು. ನಂತರ, ಸಾರ್ವಜನಿಕರೊಬ್ಬರ ವಾಹನದಲ್ಲಿ ಠಾಣೆಗೆ ಬಂದು ಪ್ರಕಾಶ್ ಅವರು ದೂರು ನೀಡಿದ್ದಾರೆ’ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.