ADVERTISEMENT

ವಾಟಾಳ್‌ ನಾಗರಾಜ್‌ ಪತ್ನಿ ಜ್ಞಾನಾಂಬಿಕೆ ನಿಧನ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 17:22 IST
Last Updated 4 ಆಗಸ್ಟ್ 2020, 17:22 IST
ಜ್ಞಾನಾಂಬಿಕೆ ವಾಟಾಳ್ ನಾಗರಾಜ್
ಜ್ಞಾನಾಂಬಿಕೆ ವಾಟಾಳ್ ನಾಗರಾಜ್    

ಬೆಂಗಳೂರು: ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ ವಾಟಾಳ್ ನಾಗರಾಜ್ (60ವರ್ಷ) ಕಿಡ್ನಿ ವೈಫಲ್ಯದಿಂದ ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿಪುರಂನ ಮಲ್ಲಿಗೆ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್‌ ಅವರ ಸ್ವಗೃಹ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇಡಲಾಗಿದೆ.

ಬುಧವಾರ ಬೆಳಗ್ಗೆ 9:00ಕ್ಕೆ ಬೆಂಗಳೂರಿನಿಂದ ಪಾರ್ಥಿವ ಶರೀರ ತೆಗೆದುಕೊಂಡು ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ 16 ಗ್ರಾಮದ ಜಮೀನಿನಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.