ADVERTISEMENT

'ವಿಬಿ ಜಿ ರಾಮ್‌ ಜಿ'ಗೆ ತೆಲುಗುದೇಶಂ ಅಪಸ್ವರ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 21:35 IST
Last Updated 23 ಜನವರಿ 2026, 21:35 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ‘ವಿಬಿ ಜಿ ರಾಮ್‌ ಜಿ’ ಕಾಯ್ದೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಯೋಜನೆ ಜಾರಿಗೆ ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರಿಸಿರುವುದನ್ನು ಅವರು ಪ್ರಸ್ತಾಪಿಸಿದ್ದಾರೆ. ಆದ್ದರಿಂದ ನಾಯ್ಡು ಹೇಳಿಕೆ ರಾಜಕೀಯವಾಗಿ ಮಹತ್ವದ್ದು ಮತ್ತು ಕೇಂದ್ರ ಹಾಗೂ ರಾಜ್ಯಗಳ ಸಂಬಂಧಗಳ ಮೇಲೆ ಪರಿಣಾಮ ಬೀರುವಂತಹದ್ದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT

ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮದು ಹೊಸ ರಾಜ್ಯವಾಗಿರುವುದರಿಂದ ಈ ಯೋಜನೆ ಜಾರಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

‘ಕೇಂದ್ರದ ಎನ್‌ಡಿಎ ಸರ್ಕಾರದ ಭಾಗವಾಗಿರುವ ತೆಲುಗು ದೇಶಂ ಪಕ್ಷ ಯೋಜನೆ ಕುರಿತು ಕಳವಳ ವ್ಯಕ್ತಪಡಿಸಿರುವುದು ಮಹತ್ವದ ಸಂಗತಿ. ಕಾಂಗ್ರೆಸ್‌ ಮತ್ತು ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ಈ ಕಾಯ್ದೆಯನ್ನು ವಿರೋಧಿಸುತ್ತಲೇ ಬಂದಿವೆ. ಯೋಜನೆಗೆ ಹಣಕಾಸು ಒದಗಿಸುವ ಹೊಣೆಗಾರಿಕೆ ರಾಜ್ಯಗಳಿಗೆ ವರ್ಗಾಯಿಸಿರುವುದರಿಂದ ಒಕ್ಕೂಟ ವ್ಯವಸ್ಥೆ ಬಲಹೀನಗೊಂಡಿದೆ. ಈ ಯೋಜನೆಯ ಕುರಿತು ಎನ್‌ಡಿಎ ಒಕ್ಕೂಟದಲ್ಲೇ ಒಮ್ಮತವಿಲ್ಲ ಎಂಬುದು ಬಯಲಿಗೆ ಬಂದಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.