ADVERTISEMENT

ವಿಬಿ ಜಿ ರಾಮ್‌ಜಿ ಕಾಯ್ದೆ ಜಾರಿ ತಡೆಯಲಾಗದು: ಛಲವಾದಿ ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 15:33 IST
Last Updated 23 ಫೆಬ್ರುವರಿ 2026, 15:33 IST
<div class="paragraphs"><p>ಛಲವಾದಿ ನಾರಾಯಣಸ್ವಾಮಿ</p></div>

ಛಲವಾದಿ ನಾರಾಯಣಸ್ವಾಮಿ

   

ಬೆಂಗಳೂರು: ಕಾಂಗ್ರೆಸ್‌ನವರು ಎಷ್ಟೇ ಪ್ರತಿಭಟನೆ ಮಾಡಿದರೂ ‘ವಿಬಿ ಜಿ ರಾಮ್‌ಜಿ’ ಕಾಯ್ದೆ ಅನುಷ್ಠಾನ ತಡೆಯಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ವಿಬಿ ಜಿ ರಾಮ್‌ಜಿ ಕಾಯ್ದೆ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಈ ಕಾಯ್ದೆಗೆ ದೇಶ ವ್ಯಾಪಿ ಜನರ ಬೆಂಬಲ ಸಿಕ್ಕಿದೆ. ಅದನ್ನು ವಾಪಸ್ ಪಡೆಯುವ ಸಂದರ್ಭ ಒದಗಿ ಬರುವುದಿಲ್ಲ’ ಎಂದು ತಿಳಿಸಿದರು.

ADVERTISEMENT

ಪುನಃ ನರೇಗಾ ಕಾಯ್ದೆ ಜಾರಿಯಾಗಬೇಕೆಂದು ಚಿಕ್ಕಬಳ್ಳಾಪುರದಲ್ಲಿ ಹೋರಾಟ ಮಾಡಿದ್ದಾರೆ. ಎಐ ಶೃಂಗಸಭೆ ವಿರೋಧಿಸಲು ಎಷ್ಟು ಬಟ್ಟೆ ಬಿಚ್ಚಿಕೊಂಡಿದ್ದಾರೊ ಅದಕ್ಕಿಂತ ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ಸರಿ ವಿಬಿ ಜಿ ರಾಮ್‌ಜಿ ಕಾಯ್ದೆ ಜಾರಿ ಆಗಿಯೇ ಆಗುತ್ತದೆ. ಇದರಿಂದ ಬಡ ಕೂಲಿ–ಕಾರ್ಮಿಕರಿಗೆ ಅನುಕೂಲವಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.