
ಪ್ರಜಾವಾಣಿ ವಾರ್ತೆ
ಬೆಂಗಳೂರು: ಜ.22 ರಿಂದ 31ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಯಲಿದೆ.
ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಬೇಕು ಎಂದು ಬುಧವಾರ(ಜ.14) ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ವಿಧಾನ ಮಂಡಲದ ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರಚಂದ್ ಗೆಹಲೋತ್ ಭಾಷಣವಿರಲಿದೆ.
ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಕಾಂಗ್ರೆಸ್ ಸರ್ಕಾರವು ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಕುರಿತು ಚರ್ಚಿಸಲು ಎರಡು ದಿನಗಲ ಕಾಲ ವಿಧಾನ ಮಂಡಲದ ಜಂಟಿ ಅಧಿವೇಶನ ಕರೆಯುವುದಾಗಿ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.