ADVERTISEMENT

ಅರೆ ನ್ಯಾಯಾಂಗದಲ್ಲೂ ವಿಡಿಯೊ ಮುಖೇನ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 21:11 IST
Last Updated 6 ಆಗಸ್ಟ್ 2021, 21:11 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಅರೆ ನ್ಯಾಯಾಂಗದ ಅಧಿಕಾರಿಗಳೂ ವಿಡಿಯೊ ಕಾನ್ಫರೆನ್ಸ್(ವಿ.ಸಿ) ಮೂಲಕ ವಿಚಾರಣೆ ಆರಂಭಿಸಲು ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಸಾಂಕ್ರಾಮಿಕ ರೋಗದ ನಡುವೆಯೂ ನಡೆಸಲು ಇದು ಅನುಕೂಲ ಆಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು.

‘ಇ–ಆಡಳಿತದ ಸಹಾಯ ಪಡೆದು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ಆರಂಭಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆಗಳನ್ನು ನಡೆಸಲು ಈಗಾಗಲೇ ಸೌಲಭ್ಯ ನೀಡಲಾಗಿದೆ. ಆದರೆ, ವಿಚಾರಣೆ ನಡೆಸಲು ಬೇಕಾದ ಸೌಲಭ್ಯಗಳು ಇರಲಿಲ್ಲ’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವರದಿ ಸಲ್ಲಿಸಿದ್ದಾರೆ.

ADVERTISEMENT

ಸೆಪ್ಟೆಂಬರ್ 16ರೊಳಗೆ ಎಲ್ಲಾ ಅರೆ ನ್ಯಾಯಾಂಗ ಅಧಿಕಾರಿಗಳಿಗೆ ವಿಡಿಯೊ ಕಾನ್ಫರೆನ್ಸ್ ವಿಚಾರಣೆ ನಡೆಸಲು ಬೇಕಾದ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದ ಪೀಠ, ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.