ADVERTISEMENT

ಕೇರಳ ಸಿ.ಎಂ ಪುತ್ರಿ ಮೇಲ್ಮನವಿ: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 1:18 IST
Last Updated 14 ಅಕ್ಟೋಬರ್ 2025, 1:18 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಸಾಫ್ಟ್‌ವೇರ್‌ ಸೇವೆ ಒದಗಿಸಿದ ನೆಪದಲ್ಲಿ ಬಹುಕೋಟಿ ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಎಫ್‌ಐಒ (ಸೀರಿಯಸ್‌ ಫ್ರಾಡ್‌ ಇನ್ವೆಸ್ಟಿಗೇಷನ್‌ ಆಫೀಸ್‌) ತನಿಖೆಯನ್ನು ಪ್ರಶ್ನಿಸಿ, ‘ಎಕ್ಸಾಲಾಜಿಕ್‌ ಸಲ್ಯೂಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕಿಯೂ ಆದ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ಟಿ.ವೀಣಾ ಅವರ ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಸಂಬಂಧ ವೀಣಾ ಸಲ್ಲಿಸಿರುವ ರಿಟ್‌ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಅರ್ಜಿದಾರರ ವಿರುದ್ಧ ಯಾವುದೇ ಆತುರದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಬೇಕು’ ಎಂದು ಕೋರಿದರು. ಆದರೆ, ಇದನ್ನು ನಿರಾಕರಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಎಸ್‌ಎಫ್‌ಐಒ ನಿರ್ದೇಶಕ ಮತ್ತು ಕೇಂದ್ರದ ಕಾರ್ಪೋರೇಟ್‌ ವ್ಯವಹಾರಗಳ ಸಚಿವಾಲಯದ ಮಹಾ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್‌ 3ಕ್ಕೆ ಮುಂದೂಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.