ADVERTISEMENT

ಹೊಸ ತಂತ್ರಜ್ಞಾನ ಬಳಸಿ ಗಣತಿ: ವೀರಶೈವ ಮಹಾಸಭಾ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 16:05 IST
Last Updated 10 ಜೂನ್ 2025, 16:05 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ಬೆಂಗಳೂರು: ‘ಮರು ಜಾತಿ ಜನಗಣತಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿರುವುದು ಸ್ವಾಗತಾರ್ಹ. ಹಿಂದಿನ ಲೋಪದೋಷಗಳನ್ನು ಸರಿಪಡಿಸಿಕೊಂಡು ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಗಣತಿ ನಡೆಸಬೇಕು’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ‘ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ವೈಜ್ಞಾನಿಕವಾಗಿಲ್ಲ ಮತ್ತು ಪಾರದರ್ಶಕವಾಗಿಲ್ಲ ಎಂದು ಆಧಾರ ಸಮೇತವಾಗಿ ಮಹಾಸಭಾ ಪ್ರತಿಭಟಿಸುತ್ತಲೇ ಬಂದಿದೆ’ ಎಂದು ಹೇಳಿದ್ದಾರೆ.

‘ಜಾತಿ ಜನಗಣತಿಗೆ ಮಹಾಸಭಾದ ವಿರೋಧವಿಲ್ಲ. ಆದರೆ, ವೈಜ್ಞಾನಿಕವಾಗಿ, ಸಮಗ್ರವಾಗಿ, ಆಧಾರ್‌ ಜೋಡಣೆ, ಎಐ ತಂತ್ರಜ್ಞಾನ ಬಳಸಿಕೊಂಡು ಅತ್ಯಾಧುನಿಕ ಪದ್ಧತಿ ಮೂಲಕ ಮರು ಗಣತಿ ನಡೆಸಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.