ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ನೇಮಕಗೊಂಡಿದ್ದಾರೆ.
ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ.ಗುರುಬಸಪ್ಪ ಅವರನ್ನು ನೇಮಕ ಮಾಡಿದ್ದು, ಇಬ್ಬರೂ ಗುರುವಾರ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.