ಹಾವೇರಿ: ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿರುವ 'ಕರ್ನಾಟಕ ವೈಭವ' ಕಾರ್ಯಕ್ರಮಕ್ಕೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ತಾಯಿ ಹೆಸರಿನಲ್ಲಿ ಸಸಿ ನೆಟ್ಟು ನೀರುಣಿಸಿದರು.
ಕೆ.ಎಲ್.ಇ ಸಂಸ್ಥೆಯ ರಾಜ ರಾಜೇಶ್ವರಿ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸಿದ ಉಪರಾಷ್ಟ್ರಪತಿ, ಕಾಲೇಜು ಆವರಣದಲ್ಲಿ ತಾಯಿ ಕೇಸರಿ ದೇವಿ ಅವರ ಹೆಸರಿನಲ್ಲಿ ಗಿಡ ಹಚ್ಚಿದರು. ನಂತರ, ಅವರ ಪತ್ನಿ ಸುದೇಶಾ ಧನಕರ್ ಅವರು ತಮ್ಮ ತಾಯಿ ಭಗವತಿ ದೇವಿ ಹೆಸರಿನಲ್ಲಿ ಗಿಡ ನೆಟ್ಟರು.
ಕರ್ನಾಟಕ ವೈಭವ ಉದ್ಘಾಟಿಸಿದ ಉಪ ರಾಷ್ಟ್ರಪತಿ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಲಾಯಿತು. ವಚನಾನಂದ ಸ್ವಾಮೀಜಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.