ಬೆಂಗಳೂರು: ನಗರದಲ್ಲಿ ಜನರಿಗೆ ಮತ್ತಷ್ಟು ವೈದ್ಯಕೀಯ ಸೌಕರ್ಯ ಕಲ್ಪಿಸಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಸಾವಿರ ಬೆಡ್ ಹೆಚ್ಚಳ ಮಾಡಲಾಗುತ್ತಿದೆ.
₹68 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ವಾರ್ಡ್‌ಗಳ ನಿರ್ಮಾಣ ಹಾಗೂ ಇತರ ಸೌಕರ್ಯ ಕಲ್ಪಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಈಗಾಗಲೇ ಟೆಂಡರ್ ಆಹ್ವಾನಿಸಿದ್ದು, ಕಾಮಗಾರಿ ಆರಂಭಿಸಲು ಒಪ್ಪಿಗೆ ನೀಡಲಾಯಿತು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬಡ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ನೋಟಾ: ನಗರಸಭೆ ಚುನಾವಣೆಯಲ್ಲಿ ‘ನೋಟಾ’ ಚಲಾಯಿಸುವ ಅವಕಾಶ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಈವರೆಗೆ ನಗರಸಭೆ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅವಕಾಶ ಇರಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ನೋಟಾ ಸೇರ್ಪಡೆ ಮಾಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.