ADVERTISEMENT

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಏಪ್ರಿಲ್ 2022, 11:11 IST
Last Updated 7 ಏಪ್ರಿಲ್ 2022, 11:11 IST
ವಿಕ್ಟೋರಿಯಾ ಆಸ್ಪತ್ರೆ ಸಂಕೀರ್ಣದಲ್ಲಿ ರೋಗಿಗಳ ಸಂಬಂಧಿಕರು ರಸ್ತೆಯ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿರುವುದು –ಪ್ರಜಾವಾಣಿ ಚಿತ್ರ/ಪ್ರಶಾಂತ್ ಎಚ್.ಜಿ.
ವಿಕ್ಟೋರಿಯಾ ಆಸ್ಪತ್ರೆ ಸಂಕೀರ್ಣದಲ್ಲಿ ರೋಗಿಗಳ ಸಂಬಂಧಿಕರು ರಸ್ತೆಯ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿರುವುದು –ಪ್ರಜಾವಾಣಿ ಚಿತ್ರ/ಪ್ರಶಾಂತ್ ಎಚ್.ಜಿ.   

ಬೆಂಗಳೂರು: ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ಮಂಜೂರು ಮಾಡದಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಹರಿಹಾಯ್ದಿದೆ.

ಈ ವಿಚಾರವಾಗಿ ಪ್ರಕಟವಾದ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ಕೋವಿಡ್ ಸಂದರ್ಭದಲ್ಲಿ ಸೋಂಕಿತರ ಪರದಾಟ ನೋಡಿದ್ದೆವು, ಆದರೆ ಈಗಿನ ಸ್ಥಿತಿ ಅದಕ್ಕಿಂತ ಭೀಕರವಾಗಿದೆ. ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ. ದಾಖಲಾತಿಯಾಗುತ್ತಿಲ್ಲ. ಈ ಮಟ್ಟಿಗೆ ಆರೋಗ್ಯ ಕ್ಷೇತ್ರವನ್ನು ಸರ್ಕಾರ ಹದಗೆಡಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ವಿಕ್ಟೊರಿಯಾ ಆಸ್ಪತ್ರೆಗೆ ಗಡುವು ಮುಗಿದರೂ ಹೆಚ್ಚುವರಿ ಕಟ್ಟಡ ನೀಡದಿರುವುದು ನಿಮ್ಮ ಅಸಾಮರ್ಥ್ಯವಲ್ಲವೇ?’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಕೆಪಿಸಿಸಿ ಪ್ರಶ್ನಿಸಿದೆ.

ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಪ್ರಜಾವಾಣಿಯು ಏಪ್ರಿಲ್‌ 7ರ ಸಂಚಿಕೆಯಲ್ಲಿ ‘ ವಿಕ್ಟೋರಿಯಾ ಸಂಕೀರ್ಣ: ರಸ್ತೆಯಲ್ಲಿಯೇ ಆಕ್ರಂದನ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.