ಬೆಂಗಳೂರು: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಸಂಸದ ಕೋಟ ಶ್ರೀನಿವಾಸಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆಗಳು ಎಂಬುದು ಮತ್ತೆ ಸಾಬೀತಾಗಿದೆ. ಅಲ್ಲದೆ, ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಉತ್ತೇಜನ ಕೊಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.