ADVERTISEMENT

ವಿಧಾನ ಪರಿಷತ್ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 19:19 IST
Last Updated 10 ಅಕ್ಟೋಬರ್ 2019, 19:19 IST

ಬೆಂಗಳೂರು: ವಿಧಾನ ಪರಿಷತ್ ಸಭಾನಾಯಕರಾಗಿ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೇಮಕಗೊಂಡಿದ್ದು, ಗುರುವಾರ ಪರಿಷತ್‌ನಲ್ಲಿ ಪ್ರಕಟಿಸಲಾಯಿತು.

ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್‌ನ ಎಸ್.ಆರ್.ಪಾಟೀಲ, ಸರ್ಕಾರದ ಮುಖ್ಯ ಸಚೇತಕರಾಗಿ ಕವಟಗಿಮಠ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಬಸವರಾಜ ಹೊರಹಟ್ಟಿ, ಉಪನಾಯಕರಾಗಿ ಮರಿತಿಬ್ಬೇಗೌಡ, ಜೆಡಿಎಸ್ ಸಚೇತಕರಾಗಿ ಆರ್.ಚೌಡರೆಡ್ಡಿ ತೂಪಲ್ಲಿ ನೇಮಕಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT