ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು. ಮುಖಕ್ಕೆಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.