ADVERTISEMENT

Video | ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ನಲುಗಿದ ಕಲಬುರಗಿ, ಬೀದರ್‌, ಯಾದಗಿರಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 18:31 IST
Last Updated 29 ಸೆಪ್ಟೆಂಬರ್ 2025, 18:31 IST

ರಾಜ್ಯದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿಹೋಗಿವೆ. ಮಹಾರಾಷ್ಟ್ರದ ಜಲಾಶಯಗಳಿಂದ ಬಂದ ನೀರು ಹಾಗೂ ನಿರಂತರ ಮಳೆಯಿಂದ ಭೀಮಾ, ಕಾಗಿಣಾ, ಅಮರ್ಜಾ, ಮುಲ್ಲಾಮಾರಿ ಸೇರಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಲಬುರಗಿ, ಬೀದರ್ ಹಾಗೂ ಯಾದಗಿರಿಯ ಗ್ರಾಮಗಳು ಮುಳುಗಡೆಯಾಗಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಲವುಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪ್ರವಾಹದ ಸಂಪೂರ್ಣ ವರದಿ, ಸಂತ್ರಸ್ತರ ಸ್ಥಿತಿ ಹಾಗೂ ಸರ್ಕಾರದ ಪರಿಹಾರ ಕ್ರಮಗಳ ಕುರಿತ ವಿವರ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.