ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೋರಾಟವೊಂದು ಭುಗಿಲೆದ್ದಿದೆ. ಅದು, ಮಧ್ಯ ಕರ್ನಾಟಕಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ್ದು. ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಈ ಭಾಗದ ರೈತರು ಪಟ್ಟು ಹಿಡಿದಿದ್ದಾರೆ. ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಹೋರಾಟ ಬಿಸಿತುಪ್ಪವಾಗಿ ಪರಿಣಮಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.