ADVERTISEMENT

ಪರಿಷತ್‌ ಚುನಾವಣೆ: ಮತದಾರರ ಅಂತಿಮ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 19:30 IST
Last Updated 17 ಜನವರಿ 2022, 19:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ವಿಧಾನಪರಿಷತ್ತಿನ ವಾಯವ್ಯ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ.

ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 19,505 (ಗಂಡು–13,653, ಹೆಣ್ಣು–5,852, ಇತರರು–0), ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 17,244 (ಗಂಡು–10,601, ಹೆಣ್ಣು–6,642, ಇತರರು–1), ವಾಯವ್ಯ ಪದವೀಧರರ ಕ್ಷೇತ್ರದಲ್ಲಿ ಒಟ್ಟು 72,674 (ಗಂಡು–52,104, ಹೆಣ್ಣು–20,564, ಇತರರು–6), ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಒಟ್ಟು 1,33,073 (ಗಂಡು–77,291, ಹೆಣ್ಣು–55,761, ಇತರರು–21) ಮತದಾರರು ಇದ್ದಾರೆ.

ಬೆಳಗಾವಿ ಮತ್ತು ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ್‌ಗಳ ಕಚೇರಿ ಮತ್ತು ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಮತಗಟ್ಟೆಗಳಲ್ಲಿ ಮತದಾರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.