ADVERTISEMENT

ವಿಧಾನ ಪರಿಷತ್‌ ಸದಸ್ಯತ್ವಕ್ಕೆ ಜೆಡಿಎಸ್‌ನ ಸಿ.ಆರ್‌ ಮನೋಹರ್ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 16:33 IST
Last Updated 29 ನವೆಂಬರ್ 2021, 16:33 IST
ಸಿ.ಆರ್‌ ಮನೋಹರ್‌
ಸಿ.ಆರ್‌ ಮನೋಹರ್‌   

ಬೆಂಗಳೂರು: ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಸಿ.ಆರ್‌. ಮನೋಹರ್‌ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಕೋಲಾರ– ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಮನೋಹರ್‌ ಕಳೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಜೆಡಿಎಸ್‌ ತೊರೆದು ಬಿಜೆಪಿ ಸೇರಿ, ಆ ಪಕ್ಷದಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಣಕ್ಕಿಳಿಸಲು ನಿರ್ಧರಿಸಿದ್ದರು. ಆದರೆ, ಬಿಜೆಪಿಯಲ್ಲೂ ಟಿಕೆಟ್‌ ದೊರಕಿರಲಿಲ್ಲ. ಈಗ ಕಾಂಗ್ರೆಸ್‌ ಸೇರಲು ಮುಂದಾಗಿರುವ ಅವರು ಪರಿಷತ್‌ ಸದಸ್ಯತ್ವ ಹಾಗೂ ಜೆಡಿಎಸ್‌ ಪ್ರಾಥಮಿಕ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಭಾನುವಾರವೇ ರಾಜೀನಾಮೆಗೆ ಮುಂದಾಗಿದ್ದ ಮನೋಹರ್‌, ಸಭಾಪತಿಯವರ ಗೃಹ ಕಚೇರಿಗೆ ಹೋಗಿದ್ದರು. ಆದರೆ, ಹೊರಟ್ಟಿ ದೆಹಲಿ ಪ್ರವಾಸದಲ್ಲಿದ್ದರು. ಸೋಮವಾರ ರಾತ್ರಿ ಪುನಃ ಸಭಾಪತಿಯವರನ್ನು ಭೇಟಿಮಾಡಿ ರಾಜೀನಾಮೆ ಸಲ್ಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.