ADVERTISEMENT

Independence Day | ವಿಧಾನಸೌಧಕ್ಕೆ ವಿದ್ಯುತ್ ದೀಪಗಳ ಅಲಂಕಾರ: ವೀಕ್ಷಣೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2023, 11:10 IST
Last Updated 15 ಆಗಸ್ಟ್ 2023, 11:10 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಸ್ವಾತಂತ್ರ್ಯೋತ್ಸವ ದಿನವಾದ ಮಂಗಳವಾರ (ಆಗಸ್ಟ್ 15) ಸಂಜೆಯಿಂದ ರಾತ್ರಿಯವರೆಗೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯುತ್ ದೀಪಗಳ ಅಲಂಕಾರ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದೆ. ಹೀಗಾಗಿ, ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ.

‘ವಿಧಾನಸೌಧ ಎದುರಿನ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ (ಬಾಳೆಕುಂದ್ರಿ ವೃತ್ತದಿಂದ ಕೆ.ಆರ್. ವೃತ್ತದವರೆಗೆ) ಎರಡೂ ಬದಿಯೂ ಸಂಜೆಯಿಂದ ರಾತ್ರಿಯವರೆಗೂ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಹೈಕೋರ್ಟ್ ಪಾರ್ಕೀಂಗ್ ಆವರಣ, ಕಿಂಗ್ಸ್ ರಸ್ತೆ ಹಾಗೂ ಎಂ.ಎಸ್. ಬಿಲ್ಡಿಂಗ್ ಒಳಭಾಗದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

ADVERTISEMENT

‘ಸಾರ್ವಜನಿಕರು ಬಿಎಂಟಿಸಿ ಬಸ್ ಹಾಗೂ ಮೆಟ್ರೊಗಳನ್ನು ಬಳಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.