ADVERTISEMENT

ದಲಿತರನ್ನು ನೇಮಕ ಮಾಡಿದರೆ ಸಹಕಾರ ಸಂಘ ಹಾಳಾಗುವುದಿಲ್ಲ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 20:23 IST
Last Updated 18 ಆಗಸ್ಟ್ 2025, 20:23 IST
<div class="paragraphs"><p>ಶಿವರಾಜ ತಂಗಡಗಿ</p></div>

ಶಿವರಾಜ ತಂಗಡಗಿ

   

ಬೆಂಗಳೂರು: ‘ಸಹಕಾರ ಸಂಘಗಳ ನಿರ್ದೇಶಕರ ಹುದ್ದೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ನಾಮನಿರ್ದೇಶನ ಮಾಡುವುದರಿಂದ ಸಂಘಗಳು ಹಾಳಾಗುವುದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಅವರು ಹೇಳಿದರು.

ವಿಧಾನ ಸಭೆಯಲ್ಲಿ ಸೋಮವಾರ ಮಂಡಿಸಲಾದ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2025ರ ಮೇಲಿನ ಚರ್ಚೆಯ ವೇಳೆ ಜೆಡಿಎಸ್‌ನ ಜಿ.ಟಿ.ದೇವೇಗೌಡ ಅವರು, ‘ಸಹಕಾರ ಸಂಘಗಳ ನಿರ್ದೇಶಕರ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಮೀಸಲಾತಿ ಅಡಿ ನಾಮನಿರ್ದೇಶನ ಮಾಡುವ ಕ್ರಮ ಸರಿಯಲ್ಲ. ಇದರಿಂದ ಸಹಕಾರ ಸಂಘಗಳನ್ನು ಮುಚ್ಚುವ ಸ್ಥಿತಿ ಬರುತ್ತದೆ’ ಎಂದರು.

ADVERTISEMENT

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಿವರಾಜ ತಂಗಡಗಿ ಅವರು, ‘ಜಿ.ಟಿ.ದೇವೇಗೌಡ ಅವರ ಮಾತುಗಳು ಸಹ್ಯವಲ್ಲ. ಈ ಮಾತು ಸ್ವಲ್ಪವೂ ಸರಿಯಿಲ್ಲ. ದಲಿತರಿಗೆ ಅವಕಾಶ ಸಿಗುವುದು ಬೇಡವೇ? ಈ ಮಸೂದೆಯಲ್ಲಿ ಸಮಸ್ಯೆಗಳು ಇದ್ದರೆ ಅದನ್ನು ತಿಳಿಸಿ. ಬದಲಿಗೆ ದಲಿತರನ್ನು ಸಹಕಾರ ಸಂಘಗಳಿಗೆ ನೇಮಕ ಮಾಡುವುದರಿಂದ, ಅವುಗಳನ್ನು ಮುಚ್ಚುವ ಸ್ಥಿತಿ ಬರುತ್ತದೆ ಎಂಬಂತಹ ಮಾತುಗಳನ್ನು ಆಡಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.