ಬೆಂಗಳೂರು: ವಿಧಾನಸೌಧದ 2ನೇ ಮಹಡಿಗೆ ಬಂದಿದ್ದ ವ್ಯಕ್ತಿಯೊಬ್ಬರು ಸ್ಯಾನಿಟೈಸರ್ ಹಾಗೂ ಫಿನಾಯಿಲ್ ಸೇವಿಸಿ ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
‘ಪ್ಯಾಲೇಸ್ ಗುಟ್ಟಹಳ್ಳಿಯ ನಿವಾಸಿಯಾಗಿರುವ ನಂದಕುಮಾರ್,ಮುಖ್ಯಮಂತ್ರಿ ಪರಿಹಾರ ನಿಧಿ ಬಗ್ಗೆ ಮಾಹಿತಿ ಪಡೆಯಲು ವಿಧಾನಸೌಧಕ್ಕೆ ಸಂಜೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಗಲಾಟೆ ಮಾಡಿಕೊಂಡಿದ್ದ ಅವರು ಫಿನಾಯಿಲ್ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.