ADVERTISEMENT

ವಿದ್ಯಾಗಮ: ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 21:47 IST
Last Updated 21 ಸೆಪ್ಟೆಂಬರ್ 2020, 21:47 IST

ಕೋಣಂದೂರು:ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಗೆ ‘ವಿದ್ಯಾಗಮ’ ಯೋಜನೆಯಡಿ ಪಾಠ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಉಮೇಶ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಜೊತೆ ಶಿಕ್ಷಕ ಉಮೇಶ್ ನಾಯಕ್ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT