ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕೋಶಾಧ್ಯಕ್ಷರಾಗಿ ಕೆನರಾ ಬ್ಯಾಂಕಿನ ನಿವೃತ್ತ ವಿಭಾಗೀಯ ವ್ಯವಸ್ಥಾಪಕ ಡಿ.ಆರ್.ವಿಜಯ ಕುಮಾರ್ ಅವರು ನೇಮಕಗೊಂಡಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರು ಆದೇಶ ಪತ್ರವನ್ನು ಬುಧವಾರ ಹಸ್ತಾಂತರಿಸಿದರು. ವಿಜಯ ಕುಮಾರ್ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿ, ನಿವೃತ್ತಿ ಬಳಿಕ ವಕೀಲ ವೃತ್ತಿ ಕೈಗೊಂಡಿದ್ದಾರೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು, ಅಧ್ಯಯನವನ್ನೂ ನಡೆಸಿದ್ದಾರೆ ಎಂದು ಕಸಾಪ ತಿಳಿಸಿದೆ.
‘ವಿಜಯ ಕುಮಾರ್ ಹೊಂದಿರುವ ಅಪಾರ ತಿಳಿವಳಿಕೆಯು, ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತದಲ್ಲಿ ಸ್ಪಷ್ಟತೆ ಹಾಗೂ ಪಾರದರ್ಶಕತೆಯನ್ನು ತಂದುಕೊಡಲಿದೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.